- Advertisement -
- Advertisement -
ಮಂಗಳೂರು: ವಿಧಾನ ಪರಿಷತ್ ನ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಬಿಜೆಪಿ ಮತ್ತು ಜೆಡಿಎಸ್ ಪ್ರಚಾರ ಸಭೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಮಂಗಳೂರಿನ ಸುಧೀಂದ್ರ ಸಭಾಭವನದಲ್ಲಿ ಎರಡು ಕ್ಷೇತ್ರಗಳ ಪ್ರಚಾರ ಸಭೆ ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಭಾಗಿಯಾಗಿದ್ದರು.
ನವದೆಹಲಿಗೆ ತೆರಳಿರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಗೆ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಗೈರು ಹಾಜರಾಗಿದ್ದರು
- Advertisement -