- Advertisement -


- Advertisement -
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಪಿ.ವಿ. ಮೋಹನ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
ವಿಧಾನ ಪರಿಷತ್ ಸದಸ್ಯರಾಗಿ ವಿನಯ್ ಕಾರ್ತಿಕ್, ಮಳವಳ್ಳಿ ಶಿವಣ್ಣ, ರಘು ಕೌಟಿಲ್ಯ, ತಿಪ್ಪಣ್ಣಪ್ಪ ಕಮಕನೂರು ಮತ್ತು ಲಿಂಗರಾಜ ಪಾಟೀಲ್ ಕೂಡಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿನಯ್ ಕಾರ್ತಿಕ್ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ, ಮಳವಳ್ಳಿ ಶಿವಣ್ಣ ಸಿದ್ಧರಾಮಯ್ಯ ಹೆಸರಿನಲ್ಲಿ, ರಘು ಕೌಟಿಲ್ಯ ಬಿ.ಎಸ್. ಯಡಿಯೂರಪ್ಪ ಹೆಸರಿನಲ್ಲಿ ಮತ್ತು ಲಿಂಗರಾಜ್ ಪಾಟೀಲ್ ಬಿಜೆಪಿ ಕಾರ್ಯಕರ್ತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- Advertisement -


