
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗುವ ವಿಚಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಎಂಎಲ್ಸಿ ರಾಜೇಂದ್ರ ರಾಜಣ್ಣ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಿ, ಶಾಸಕರು ಅಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರನ್ನು ನಾಯಕರನ್ನಾಗಿ ಆಯ್ಕೆ ಮಾಡುತ್ತಾರೋ ಮುಂದೆ ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಜೇಂದ್ರ ರಾಜಣ್ಣ ಹೇಳಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಸಿದ್ದರಾಮಯ್ಯನವರ ನಂತರ ಸಚಿವ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬರ್ಥದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದರು.


