Thursday, June 4, 2026
Homeತಾಜಾ ಸುದ್ದಿರಾಜ್ಯಸಭಾ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್

- Advertisement -
- Advertisement -

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಹಾಲಿ‌ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ ಬಿಜೆಪಿಯ ಮೂರನೇ ಅಭ್ಯರ್ಥಿಯಾಗಿದ್ದಾರೆ.

ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ್ದು, ಇಂದು ಲೆಹರ್ ಸಿಂಗ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈಗಾಗಲೇ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ರನ್ನು ಕಣಕ್ಕಿಳಿಸಿದ್ದು,‌ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ‌.

ವಿಧಾನಸಭೆಯ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ‌ ಸೀತಾರಾಮನ್, ಜಗ್ಗೇಶ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್, ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಮತ್ತು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನಡುವೆ ಸ್ಫರ್ಧೆ ಏರ್ಪಡಲಿದೆ.

- Advertisement -

Latest News

error: Content is protected !!