Saturday, June 13, 2026
Homeಕರಾವಳಿಉಡುಪಿಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಕೋಟ: ಇಲ್ಲಿನ ಶಿರೂರು ಮೂರ್ಕೈ ಸಮೀಪ ಹೆಗ್ಗುಂಜೆ ಗುಡ್ಡೆಯಲ್ಲಿನ ಡೈರಿ ಫಾರ್ಮ್ನಲ್ಲಿ ಹುಲ್ಲು ಕಟಾವು ನಡೆಸುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಸೋಮವಾರ ಸಂಭವಿಸಿದೆ.

ದಾಳಿಗೊಳಗಾದವರು ಸ್ಥಳೀಯ ನಿವಾಸಿ ಕೃಷ್ಣ ನಾಯ್ಕ್. ಶಿರೂರು ಮೂರ್ಕೈ ಸಮೀಪವಿರುವ ವಿಖ್ಯಾತ್‌ ಕುಮಾರ್‌ ಶೆಟ್ಟಿ ಅವರ ಡೈರಿ ಫಾರ್ಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ನಾಯ್ಕ್ ದನಗಳಿಗೆ ಹುಲ್ಲು ತರಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿದೆ.  ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಚಿರತೆ ಹಾವಳಿ ವ್ಯಾಪಕವಾಗಿದೆ. ಹಲವು ಬಾರಿ ಜಾನುವಾರುಗಳ ಮೇಲೆ ದಾಳಿ ನಡೆದಿದ್ದು, ಇದೀಗ ಮನುಷ್ಯರ ಮೇಲೆಯೂ ದಾಳಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಬೇಕು. ಗಾಯಾಳುವಿಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!