Friday, June 5, 2026
Homeಕರಾವಳಿಉಡುಪಿಬ್ರಹ್ಮಾವರ: ರೈಲು ಡಿಕ್ಕಿ ಹೊಡೆದು ಚಿರತೆ ಸಾವು !

ಬ್ರಹ್ಮಾವರ: ರೈಲು ಡಿಕ್ಕಿ ಹೊಡೆದು ಚಿರತೆ ಸಾವು !

- Advertisement -
- Advertisement -

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನೀಲಾವರ ಸಮೀಪದಲ್ಲಿ ರೈಲು ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ರೈಲ್ವೆ ಬ್ರಿಜ್ ನಿಂದ ಚಿರತೆ ಗದ್ದೆಗೆ ಬಿದ್ದಿದೆ. ಆಹಾರ ಅರಸಿಕೊಂಡು ಬೆಟ್ಟದಿಂದ ಚಿರತೆ ಗ್ರಾಮದತ್ತ ಬಂದಿರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇಲ್ಲಿನ ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಚಿರತೆಯ ಮೃತದೇಹವನ್ನ ಪರಿಶೀಲಿಸಿದ್ದಾರೆ. ಹಾಗೂ ಮರಣೋತ್ತರ ಪರೀಕ್ಷೆಗಳನ್ನು ನಡೆಸಿ ಅಂತ್ಯಸಂಸ್ಕಾರ ನಡೆಸುವುದಾಗಿ ಮಾಹಿತಿಯನ್ನು ನೀಡಿದ್ದಾರೆ.

- Advertisement -

Latest News

error: Content is protected !!