Wednesday, June 24, 2026
Homeಚಿಕ್ಕಮಗಳೂರುಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಹಾವಳಿ

ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಹಾವಳಿ

- Advertisement -
- Advertisement -

ಚಿಕ್ಕಮಗಳೂರು: ದಿನದಿಂದ ದಿನಕ್ಕೆ ನಾಡಿನಲ್ಲಿ ಕಾಡು ಪ್ರಾಣಿಗಳ ಕಾಟ ಹೆಚ್ಚಾಗುತ್ತಿದ್ದು, ಅದರಲ್ಲಿ ಚಿರತೆಗಳ ಹಾವಳಿಯೇ ಜಾಸ್ತಿಯಾಗಿದೆ. ಕಳೆದ ಎರಡು ದಿನಗಳಿಂದ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆಯೊಂದು ಓಡಾಡುತ್ತಿದೆ ಎನ್ನುವ ಸುದ್ದಿ ಹಬ್ಬಿದೆ.

ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಿಗೆ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವ ವಿಚಾರ ಭಯವನ್ನುಂಟು ಮಾಡಿದ್ದು, ಆದಷ್ಟು ಬೇಗ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!