- Advertisement -
- Advertisement -
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ ಎನ್ನಲಾಗಿದೆ.
ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಚಿರತೆ ದಾಳಿಯಿಂದ ಸಾಕು ನಾಯಿ ತಪ್ಪಿಸಿಕೊಂಡಿದೆ.
ಇನ್ನು ರಾತ್ರಿ ಮನೆಯ ನಾಯಿ ಜೋರಾಗಿ ಕೂಗುತ್ತಿದ್ದ ಕಾರಣ ಮನೆಯವರು ಇಂದು ಬೆಳಗ್ಗೆ ಸಿಸಿಟಿವಿ ದೃಶ್ಯ ವೀಕ್ಷಿಸಿದಾಗ ಚಿರತೆ ಮನೆಗೆ ಬಂದ ವಿಷಯ ತಿಳಿದಿದೆ.
ಘಟನೆ ಸಂಬಂಧ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -