Thursday, May 2, 2024
Homeಕರಾವಳಿಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಜಮೀರ್

ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಜಮೀರ್

spot_img
- Advertisement -
- Advertisement -

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಝಮೀರ್ ಅಹ್ಮದ್‌ ಖಾನ್ ಅವರು, ‘2024-25ಕ್ಕೆ ಪ್ರಸ್ತಾಪಿಸಲಾದ ಒಟ್ಟು ಬಜೆಟ್ ಗಾತ್ರದಲ್ಲಿ ಅಲ್ಪಸಂಖ್ಯಾತರಿಗೆ ಶೇಕಡಾ 1ಕ್ಕಿಂತ ಕಡಿಮೆ ಅನುದಾನವನ್ನು ನೀಡಲಾಗಿದೆ,’ ಎಂದು ಸ್ವತಃ ಸೋಮವಾರದಂದು ವಿಧಾನಸಭೆಗೆ ತಿಳಿಸಿದ್ದಾರೆ.

ಶಿಕಾರಿಪುರದ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ, ’ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಕುರಿತ ಪ್ರಶ್ನೆಯನ್ನು ಕೇಳಿದ್ದು, ಬರಪೀಡಿತ ರೈತರಿಗಿಂತ ಕಾಂಗ್ರೆಸ್‌ ಸರಕಾರ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತಿದೆ ಎಂದು ಆಪಾದಿಸಿದ್ದರು. ಈ ಪ್ರಶ್ನೆಗೆ ಉತ್ತರಿಸಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, 2024-25ರ ಸಾಲಿನ ಬಜೆಟ್‌ನ 3.71 ಲಕ್ಷ ಕೋಟಿ ರೂ. ಅಲ್ಪಸಂಖ್ಯಾತರಿಗೆ 1% ರಷ್ಟು ಕೂಡ ಅನುದಾನದಲ್ಲಿ ಮೀಸಲು ನೀಡಲಾಗಿಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 1,000 ಕೋಟಿ ರೂ.ಗೆ ಕ್ರಿಯಾ ಯೋಜನೆ ರೂಪಿಸಿದ್ದೇವೆ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 300 ಕೋಟಿ ರೂ.ಗಳಲ್ಲಿ 165 ಕೋಟಿ ಮಾತ್ರ ಬಿಡುಗಡೆ ಮಾಡಿದ್ದೇವೆ,’ ಎಂದು ಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ. ಬರ ಪೀಡಿತ ರೈತರಿಗೆ ಸಹಾಯ ಮಾಡದೆ, ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ.ಗಳನ್ನು ಸಿಎಂ ಘೋಷಿಸಿದ್ದಾರೆ. ಇದಲ್ಲದೆ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಲ್ಲಿ ತಾರತಮ್ಯ ಎಸಗಿದೆ. ಹೆಚ್ಚಿನ ಅನುದಾನ ಕಾಂಗ್ರೆಸ್ ಶಾಸಕರ ಪಾಲಾಗಿದೆ ಎಂದು ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್‌ ಖಾನ್, 1000 ಕೋಟಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕ್ರಿಯಾ ಯೋಜನೆಯಡಿ ಹಣವನ್ನು 3 ವರ್ಷಗಳಲ್ಲಿ ಬಿಡುಗಡೆ ಮಾಡಲಾಗುವುದು. ಈಗಾಗಲೇ ಬಿಜೆಪಿ ಶಾಸಕರಿರುವ 29 ವಿಧಾನಸಭಾ ಕ್ಷೇತ್ರಗಳು ಮತ್ತು 8 ಜೆಡಿಎಸ್ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ನಾವು ಜನಸಂಖ್ಯೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ಕಾಲೋನಿಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿದ್ದೇವೆ. ಇದರ ಆಧಾರದ ಮೇಲೆ ವಿಧಾನಸಭೆ ಕ್ಷೇತ್ರಗಳಿಗೆ ಹಣವನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!