Saturday, May 18, 2024
Homeತಾಜಾ ಸುದ್ದಿಮಂಗಳೂರು: ಒಂದೇ ಕೊಠಡಿಯಲ್ಲಿ 1ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ: ಬಲ್ಮಠ ಶಾಲೆಗೆ ನೂತನ ಕಟ್ಟಡ...

ಮಂಗಳೂರು: ಒಂದೇ ಕೊಠಡಿಯಲ್ಲಿ 1ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ: ಬಲ್ಮಠ ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ

spot_img
- Advertisement -
- Advertisement -

ಮಂಗಳೂರು: ‘ಬಲ್ಮಠದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಒಂದೇ ಕೊಠಡಿಯಲ್ಲಿ ಕೂರಿಸಿ ಪಾಠ ಮಾಡಲಾಗುತ್ತಿದೆ. ಇಲ್ಲಿನ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕ ಸಂಕಷ್ಟಕ್ಕೆ ಶಿಕ್ಷಣ ಇಲಾಖೆ ಸ್ಪಂದಿಸುತ್ತಿಲ್ಲ’ ಎಂದು ಸಿಪಿಎಂ, ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಟೀಕಿಸಿವೆ.

ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡಬೇಕು ಎಂದು ಕೋರಿ ಸಿಪಿಎಂ, ಡಿವೈಎಫ್‌ಐ ಹಾಗೂ ಎಸ್ಎಫ್‌ಐ ನಿಯೋಗವು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜ ಅವರಿಗೆ ಮನವಿ ಸಲ್ಲಿಸಿತು. ‘ಶಿಕ್ಷಕರ ತರಬೇತಿ ಸಂಸ್ಥೆಯ ಮೂಲಕ 1912ರಲ್ಲಿ ಪ್ರಾರಂಭವಾದ ಈ ಶಾಲೆ ಶತಮಾನೋತ್ಸವವನ್ನು ಕಂಡಿದೆ. ನಗರದ ಹೃದಯಭಾಗದಲ್ಲಿರುವ ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗಿನ ಎಲ್ಲಾ 43 ವಿದ್ಯಾರ್ಥಿಗಳಿದ್ದಾರೆ. ಮೂರು ವರ್ಷಗಳಿಂದಲೂ ಒಂದೇ ಕೊಠಡಿಯಲ್ಲಿ ಪಾಠ ನಡೆಸಲಾಗುತ್ತಿದೆ’ ಎಂದು ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ದೂರಿದ್ದಾರೆ.

- Advertisement -
spot_img

Latest News

error: Content is protected !!