Thursday, May 2, 2024
Homeಕರಾವಳಿಅನಂತಕುಮಾರ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ; ಮಂಕಾಳ ವೈದ್ಯ

ಅನಂತಕುಮಾರ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ; ಮಂಕಾಳ ವೈದ್ಯ

spot_img
- Advertisement -
- Advertisement -

ಕಾರವಾರ: ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮಾತುಗಳನ್ನಾಡಿದ್ದು, ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.

‘ಬಿಜೆಪಿಯು ಅನಂತಕುಮಾರ ಅವರನ್ನು ಪಕ್ಷದಿಂದ ಉಚ್ಛಾಟಿಸದಿದ್ದರೆ, ಪಕ್ಷವು ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂಬುದು ಸ್ಪಷ್ಟವಾದಂತೆ’ ಎಂದು ಅವರ ಮಾಧ್ಯಮದವರ ಜತೆ ಮಾತನಾಡುತ್ತ ಹೇಳಿದರು.

‘ದೇಶದಲ್ಲಿ ಸಂವಿಧಾನ ಬದಲಿಸಿ, ಬ್ರಿಟಿಷ್ ಮಾದರಿಯ ಆಡಳಿತ ವ್ಯವಸ್ಥೆ ತರುವ ಉದ್ದೇಶ ಬಿಜೆಪಿಗೆ ಇದ್ದಂತಿದೆ. ದೇಶವನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮಾರುವ ಉದ್ದೇಶವೂ ಅವರಿಗೆ (ಬಿಜೆಪಿ) ಇದ್ದಿರಬಹುದು ಎಂಬುದು ಸಂಸದರ ಹೇಳಿಕೆಯಿಂದ ಅರ್ಥವಾಗುತ್ತಿದೆ’ ಎಂದು ಟೀಕಿಸಿದರು.

‘ಸಂಸದ ಅನಂತಕುಮಾರ ಹೆಗಡೆಯಾಗಲಿ, ನಾವಾಗಲಿ ಜನಪ್ರತಿನಿಧಿಗಳಾಗಿದ್ದು ಸಂವಿಧಾನದಿಂದ. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಸಂವಿಧಾನವನ್ನೇ ಬದಲಿಸುವ ಮಾತುಗಳನ್ನಾಡುವುದು ಸರಿಯಲ್ಲ’ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!