Monday, June 8, 2026
Homeಕೊಡಗುಕೊಡಗು ಜಿಲ್ಲೆಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಪ್ರಧಾನಿಗೆ ಪತ್ರ

ಕೊಡಗು ಜಿಲ್ಲೆಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಪ್ರಧಾನಿಗೆ ಪತ್ರ

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಾಜ್ಯ ಸರಕಾರದ ವತಿಯಿಂದ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅಥವಾ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಆಸ್ಪತ್ರೆಯನ್ನು ಸೂಪರ್‌ ಸ್ಪೆಷಾಲಿಟಿ ಚಿಕಿತ್ಸೆ ದೊರೆಯುವಂತೆ ಉನ್ನತೀಕರಿಸಬೇಕು ಎಂದು ಕೊಡಗಿನ ಉದ್ಯಮಿ ಮತ್ತು ಸ್ಯಾನ್‌ ಗ್ರೂಪ್‌ ಆಫ್‌ ನ ವ್ಯವಸ್ಥಾಪಕ ನಿರ್ದೇಶಕ ಡಾ. ವಿಶ್ವ ಕಾರ್ಯಪ್ಪ ಬಿ.ಎಸ್‌. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲೆಯ ಬಡಜನರು ತೀವ್ರ ತೊಂದರೆಯನ್ನು ಎದುರಿಸುತ್ತಿದ್ದಾರೆ. ಇದರ ಬಗ್ಗೆ ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಜಿಲ್ಲೆಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಪತ್ರದಲ್ಲಿ ಕೋರಿಕೆಯನ್ನು ಸಲ್ಲಿಸಲಾಗಿದೆ.

ಅಲ್ಲದೇ‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣಕ್ಕೆ ನನ್ನ ಸಂಸ್ಥೆಯ ವತಿಯಿಂದ 1 ಕೋಟಿ ರೂಪಾಯಿಗಳ ಹಣವನ್ನು ಹಾಗೂ ಅಗತ್ಯವಿರುವ ಜಾಗವನ್ನೂ ನೀಡಲು ಮುಂದಾಗಿದ್ದೇನೆ. ಎಂದು ಪತ್ರದಲ್ಲಿ ವಿಶ್ವ ಕಾರ್ಯಪ್ಪ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಸೂಚನೆ ನೀಡಲಾಗಿದ್ದು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ನಿರೀಕ್ಷಿಸಲಾಗುತ್ತಿದೆ. ಸದ್ಯ ಕೊಡಗು ಜಿಲ್ಲೆಯ ಜನರು ತುರ್ತು ಚಿಕಿತ್ಸೆಗಾಗಿ ದೂರದ ಮಂಗಳೂರು ಅಥವಾ ಮೈಸೂರನ್ನು ಅವಲಂಬಿಸಬೇಕಾಗಿದೆ.

- Advertisement -

Latest News

error: Content is protected !!