Friday, June 5, 2026
Homeಕರಾವಳಿಬಂಟ್ವಾಳ: ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರ ಅವರಿಗೆ ಜೀವ ಬೆದರಿಕೆ

ಬಂಟ್ವಾಳ: ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರ ಅವರಿಗೆ ಜೀವ ಬೆದರಿಕೆ

- Advertisement -
- Advertisement -

ಬಂಟ್ವಾಳ: ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು  ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ರವರು ಬಂಟ್ವಾಳ ಉಪವಿಭಾಗದ ಡಿವೈಎಸ್ ಪಿಗೆ ದೂರು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ಅವರು ಬಿಜೆಪಿಯ ಕಾರ್ಯಕರ್ತ ಹಾಗೂ ಆರ್ ಟಿಐ ಕಾರ್ಯಕರ್ತ. ಇವರು ಬಂಟ್ವಾಳದಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡ, ಮರಳುಗಾರಿಕೆ ಸೇರಿ ಹಲವು ಅಕ್ರಮಗಳ ವಿರುದ್ಧ ಆಯಾ ಇಲಾಖೆಗೆ ಲಿಖಿತ ದೂರು ನೀಡುತ್ತಿದ್ದು, ಈ ಬಗ್ಗೆ ಅವರಿಗೆ ಕೊಲ್ಲಿ ರಾಷ್ಟ್ರಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದವು. ಇದರ ಕುರಿತು ಈ ಹಿಂದೆ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು.

ಇನ್ನು ಆಗಸ್ಟ್ 18 ರಂದು ಖಾಲಿದ್ ಅವರ ಸ್ನೇಹಿತರೊಬ್ಬರು ಕರೆ ಮಾಡಿ, ‘ನೀವು ಸ್ವಲ್ಪ ದಿನ ಹುಷಾರಾಗಿರಿ. ನಿಮ್ಮ ಮೇಲೆ ದಾಳಿ ನಡೆಸುವ ಸಂಭವ ಇದೆ’ ಎಂದು ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆ ಖಾಲಿದ್ ಅವರು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!