Sunday, June 7, 2026
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಬೆಳ್ಳಾರೆಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಆರೋಪ:...

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಬೆಳ್ಳಾರೆಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಆರೋಪ: ಠಾಣೆಯಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು

- Advertisement -
- Advertisement -

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿಗಳ ಬಂಧನವಾಗುತ್ತಿದ್ದಂತೆ ಸಹಜ ಸ್ಥಿತಿಗೆ ಮರಳುತ್ತಿದ್ದ ಬೆಳ್ಳಾರೆಯಲ್ಲಿ ಮತ್ತೆ ಇದೇ ಪ್ರಕರಣ ತಲ್ಲಣ ಉಂಟು ಮಾಡಿದೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಬೆಳ್ಳಾರೆ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ.  ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಆತನ ಬಂಧನಕ್ಕೆ ಆಗ್ರಹಿಸಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಶಫೀಕ್ ಸಹೋದರ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.  ಶಫೀಕ್ ಸಹೋದರ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಇಂದು ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ , ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದೆ. ಪ್ರಶಾಂತ್ ಅವರು ದೂರು ನೀಡಲು ಠಾಣೆಗೆ ತೆರಳಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದಾರೆ. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸುತ್ತಿದ್ದಾರೆ.

- Advertisement -

Latest News

error: Content is protected !!