Friday, June 5, 2026
Homeಕರಾವಳಿಉಡುಪಿರಿಕ್ಷಾವನ್ನು ಅಡ್ಡಗಟ್ಟಿ ತಡೆದು ಚಾಲಕನಿಗೆ ಜೀವ ಬೆದರಿಕೆ- ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾವನ್ನು ಅಡ್ಡಗಟ್ಟಿ ತಡೆದು ಚಾಲಕನಿಗೆ ಜೀವ ಬೆದರಿಕೆ- ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಉಡುಪಿ: ರಿಕ್ಷಾವನ್ನು ಅಡ್ಡಗಟ್ಟಿ ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೀ ಯನ್ನು ಬಿಸಾಡಿ ಜೀವ ಬೆದರಿಕೆ ಹಾಕಿರುವ ಇಬ್ಬರ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ಆರೋಪಿಗಳನ್ನು ಆಟೋ ರಿಕ್ಷಾ ಚಾಲಕರಾದ ಸತೀಶ್‌, ವಿಠಲ ಪೂಜಾರಿ ಎಂದು ಗುರುತಿಸಲಾಗಿದೆ.

ಶಿವಾನಂದ ಎಂಬವರು ಉಡುಪಿ ಸಿಟಿ ಬಸ್‌ನಿಲ್ದಾಣದ ಕಡೆಗೆ ತಮ್ಮ ಆಟೋ ರಿಕ್ಷಾದಲ್ಲಿ ಬರುತ್ತಿರುವಾಗ ರಿಕ್ಷಾವನ್ನು ಅಡ್ಡಗಟ್ಟಿ ತಡೆದು, ಅವಾಚ್ಯ ಶಬ್ದಗಳಿಂದ ಬೈದು, ರಿಕ್ಷಾವನ್ನು ದೂಡಿ, ಕೀ ಯನ್ನು ತೆಗೆದು ಬಿಸಾಡಿದ್ದಲ್ಲದೆ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!