Friday, June 26, 2026
Homeಕರಾವಳಿದ.ಕ. ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಗೆ ಕೊಲೆ ಬೆದರಿಕೆ

ದ.ಕ. ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಗೆ ಕೊಲೆ ಬೆದರಿಕೆ

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುವವರ ಮೇಲೆ ಹಲ್ಲೆ ಮಾಡದೇ ನೇರವಾಗಿ ಪೋಲೀಸರ ಕೈಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.

ಸೋಮವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಸಿಂಧೂ ಬಿ ರೂಪೇಶ್, ಅಕ್ರಮ ಜಾನುವಾರು ಸಾಗಾಟ ಮಾಡುವ ಸಂದರ್ಭ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದೂ ಹೇಳಿದ್ದರು.

ಈ ವಿಚಾರ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳನ್ನು ‘ಫಸ್ಟ್ ಮೊಲೆನ್ ಕರ್ತ್ ಕೆರೊಡು‘ (ಮೊದಲು ಇವಳನ್ನು ಕಡಿದು ಕೊಲ್ಲಬೇಕು) ಎಂದು ತುಳುವಿನಲ್ಲಿ ಹಾಕಿದ್ದ ಪೋಸ್ಟ್ ಒಂದು ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಕಟವಾಗಿದ್ದು ಇದೀಗ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಯಿಸಿರುವ ಮಂಗಳೂರು ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅರುಣಾಂಶಗಿರಿ “ಈಗಾಗಾಲೇ ಈ ಬಗ್ಗೆ ತನಿಖೆ ಪ್ರಾರಂಭವಾಗಿದೆ. ಜಿಲ್ಲಾಧಿಕಾರಿ ಜತೆ ಮಾತಾಡಿದ್ದೇವೆ. ದೂರು ನೀಡಿದರೆ ಸ್ವೀಕರಿಸಲಾಗುತ್ತದೆ. ಇಲ್ಲದೆ ಹೋದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಯಾವ ಕಾರಣಕ್ಕೂ ಇದನ್ನು ಕಡೆಗಣಿಸಲಾಗುವುದಿಲ್ಲ” ಎಂದಿದ್ದಾರೆ.

- Advertisement -

Latest News

error: Content is protected !!