Saturday, June 6, 2026
Homeಕರಾವಳಿಪುತ್ತೂರಿನಲ್ಲಿ ಇಂದು ಮದ್ಯ ಮಾರಾಟ ನಿಷೇಧ

ಪುತ್ತೂರಿನಲ್ಲಿ ಇಂದು ಮದ್ಯ ಮಾರಾಟ ನಿಷೇಧ

- Advertisement -
- Advertisement -

ಪುತ್ತೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶ ಹೊರಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆಇಂದು ಮಧ್ಯಾಹ್ನದಿಂದ ರಾತ್ರಿಯವರೆಗೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಈ ನಿಯಮ ಮೀರಿ ಮಾರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ.

- Advertisement -

Latest News

error: Content is protected !!