ಬೆಂಗಳೂರು : 2020 ರ ಮೇ 4 ರ ನಂತರ ಎರಡು ವಾರಗಳ ಅವಧಿಗೆ ಲಾಕ್ ಡೌನ್ ಅನ್ನು ಇನ್ನಷ್ಟು ವಿಸ್ತರಿಸಲು ಗೃಹ ಸಚಿವಾಲಯವು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಆದೇಶ ಹೊರಡಿಸಿದೆ. ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು ( ಹಾಟ್ ಸ್ಪಾಟ್), ಹಸಿರು ಮತ್ತು ಕಿತ್ತಳೆ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್ ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.
ಈ ನಡುವೆ ಮತ್ತೊಂದು ಬ್ರೇಕಿಂಗ್ ಸುದ್ದಿ ಹೊರಬಿದ್ದಿದ್ದು, ಮೇ 4 ರಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೌದು, ಎಲ್ಲಾ ಝೋನ್ ಗಳಲ್ಲೂ ( ಆರೆಂಜ್. ಗ್ರೀನ್, ರೆಡ್ ಝೋನ್ ) ನಲ್ಲೂ ಕೂಡ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಹೇಳಲಾಗುತ್ತಿದೆ.
ಇದಕ್ಕೂ ಮೊದಲು , ಗ್ರೀನ್ ಝೋನ್ ನಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿತ್ತು, ಆದರೆ ಇದೀಗ ಬಂದಿರುವ ಮಾಹಿತಿ ಎಲ್ಲಾ ವಲಯಗಳಲ್ಲೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ . ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡಬಾರದು ಎಂಬ ಷರತ್ತು ವಿಧಿಸಿ ಮೇ 4 ರಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.