- Advertisement -
- Advertisement -
ಬಂಟ್ವಾಳ: ಬಜರಂಗದಳದಿಂದ ಬಿ.ಸಿ. ರೋಡ್ ಚಲೋ ಕರೆ ನೀಡಲ್ಪಟ್ಟಿದ್ದ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣದ ಕಾರಣದಿಂದ
ಮುಂಜಾಗ್ರತಾ ಕ್ರಮವಾಗಿ ಮದ್ಯದಂಗಡಿಗಳನ್ನು ಬಂದ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಮದ್ಯದಂಗಡಿಗಳನ್ನು ಮುಂದಿನ 48 ಗಂಟೆಗಳ ಅವಧಿಯವರೆಗೆ ಬಂದ್ ಮಾಡುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಬಿ.ಸಿ. ರೋಡ್ ನಲ್ಲಿ ಇಂದು ಬಜರಂಗದಳ ಕಾರ್ಯಕರ್ತರು ಜಮಾಯಿಸಿದ್ದ ಮತ್ತು ಈದ್ ಮಿಲಾದ್ ಮೆರವಣಿಗೆ ನಡೆದಿದ್ದ ಕಾರಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
- Advertisement -