Sunday, June 7, 2026
Homeಉದ್ಯಮಆಗಸ್ಟ್ 15 ರವರೆಗೆ ಕೇರಳ ಗಡಿಯ ಮದ್ಯದಂಗಡಿ ಬಂದ್!: ದ.ಕ. ಡಿಸಿ ಆದೇಶ

ಆಗಸ್ಟ್ 15 ರವರೆಗೆ ಕೇರಳ ಗಡಿಯ ಮದ್ಯದಂಗಡಿ ಬಂದ್!: ದ.ಕ. ಡಿಸಿ ಆದೇಶ

- Advertisement -
- Advertisement -

ಮಂಗಳೂರು: ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಗಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ‌. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಮಾಡಿದ್ದಾರೆ.

ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರಿವ ಐದು ಕಿಲೋ ಮೀಟರ್ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ ಆಗಲಿವೆ. ಮಂಗಳೂರು, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕಿನ ಗಡಿ ಭಾಗದ ಮದ್ಯದಂಗಡಿಗಳು ಬಂದ್ ಆಗಲಿವೆ. ಜಿಲ್ಲೆಯ ಒಟ್ಟು 19 ಗ್ರಾಮಗಳ 29 ಮದ್ಯದಂಗಡಿಗಳ ಬಂದ್ ಗೆ ಅದೇಶ ಹೊರಡಿಸಲಾಗಿದೆ.

ಅಗಸ್ಟ್ 15 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿರುವ ಕಾರಣ ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳನ್ನು ಅನುಸರಿಸಿದೆ.

- Advertisement -

Latest News

error: Content is protected !!