Sunday, June 7, 2026
Homeಕರಾವಳಿಮಂಗಳೂರುದ.ಕದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಯೋಜಕರನ್ನಾಗಿ ನೇಮಿಸಿ ಕೆಪಿಸಿಸಿ ಆದೇಶ

ದ.ಕದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಯೋಜಕರನ್ನಾಗಿ ನೇಮಿಸಿ ಕೆಪಿಸಿಸಿ ಆದೇಶ

- Advertisement -
- Advertisement -

ಮಂಗಳೂರು :  ಲೋಕಸಭೆ ಎಲೆಕ್ಷನ್ ಹಿನ್ನೆಲೆ ದ.ಕದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಯೋಜಕರನ್ನಾಗಿ ನೇಮಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

205 ಬಂಟ್ವಾಳ ಕ್ಷೇತ್ರ-ಮಾಜಿ ಮೇಯರ್ ಶಶಿಧರ್ ಹೆಗ್ಡೆ, 201 ಮೂಡಬಿದ್ರೆ ಕ್ಷೇತ್ರ – ಮಾಜಿ ಮೇಯರ್ ಮಹಾಬಲ ಮಾರ್ಲ, ಕಾರ್ಪೊರೇಟರ್ ಅನಿಲ್ ಕುಮಾರ್, 207 ಸುಳ್ಯ ಕ್ಷೇತ್ರ – ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, 202 ಮಂಗಳೂರು ಉತ್ತರ ಕ್ಷೇತ್ರ – ಕಾರ್ಪೊರೇಟರ್ ಅಬ್ದುಲ್ ರವೂಫ್, 203 ಮಂಗಳೂರು ದಕ್ಷಿಣ ಕ್ಷೇತ್ರ- ಸಂತೋಷ್ ಕುಮಾರ್ ಶೆಟ್ಟಿ, ಲಾರೆನ್ಸ್ ಡಿಸೋಜ, 200 ಬೆಳ್ತಂಗಡಿ ಕ್ಷೇತ್ರ – ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, 204 ಮಂಗಳೂರು ಕ್ಷೇತ್ರ – ಕೆಪಿಸಿಸಿ ಸದಸ್ಯೆ ಎಸ್.ಅಪ್ಪಿ, ಕಾರ್ಪೊರೇಟರ್ ಅಶ್ರಫ್ ಬಜಾಲ್, 206 ಪುತ್ತೂರು-ಆರ್.ಜಿ.ಪಿ.ಆರ್.ಎಸ್ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು, ಅಲ್ತಾಫ್ ಮೊಹಮ್ಮದ್ ಅವರು ನೇಮಕಗೊಂಡಿದ್ದಾರೆ.

- Advertisement -

Latest News

error: Content is protected !!