- Advertisement -
- Advertisement -
ಗಾಂಧಿನಗರ: ಗುಜರಾತ್ ನಲ್ಲಿ ಈ ವರ್ಷ ವಾರ್ಷಿಕ ಪರೀಕ್ಷೆಗಳನ್ನು ರದ್ದುಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ತೀರ್ಮಾನಿಸಲಾಗಿದೆ. ಮಾರ್ಚ್ ಆರಂಭದಲ್ಲಿ 10ನೇ ತರಗತಿ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸಲಾಗಿದ್ದು ಮಾರ್ಚ್ 15 ರಿಂದ ಕೊರೋನಾ ವೈರಸ್ ಕಾರಣ ಶಾಲೆಗಳನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ 1ರಿಂದ 9ನೇ ತರಗತಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸ್ ಮಾಡಲು ಗುಜರಾತ್ ಸರ್ಕಾರ ನಿರ್ಧರಿಸಿದೆ.
ಕೊರೋನಾ ವೈರಸ್ ಸೋಂಕು ಹರಡುವ ಹಿನ್ನೆಲೆಯಲ್ಲಿ ಪರೀಕ್ಷೆ ಮತ್ತು ತರಗತಿ ನಡೆಸಲು ಸಾಧ್ಯವಾಗದ ಕಾರಣ ಮುಖ್ಯಮಂತ್ರಿ ವಿಜಯ್ ರೂಪಾನಿ 1ರಿಂದ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ತೀರ್ಮಾನಿಸಿದ್ದಾರೆ. ಮಾರ್ಚ್ ಆರಂಭದಲ್ಲೇ 10ನೇ ತರಗತಿ ಮತ್ತು ಸೆಕೆಂಡ್ ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಿಎಂ ಕಚೇರಿ ಕಾರ್ಯದರ್ಶಿ ಅಶ್ವಿನಿ ಕುಮಾರ್ ತಿಳಿಸಿದ್ದಾರೆ.
- Advertisement -
