ಮಧ್ಯಪ್ರದೇಶ ನಕಲಿ ಮದ್ಯ ಸೇವಿಸಿ 12 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ 6 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿನ ಮಾನ್ಪುರಿ ಪೃಥ್ವಿ ಹಾಗೂ ಪಹಾವಾಲಿ ಗ್ರಾಮಗಳಲ್ಲಿ ಈ ದುರ್ಘಟನೆ ನಡೆದಿದ್ದು, ವಿಷಕಾರಿ ಆಲ್ಕೋಹಾಲ್ ಕುಡಿದು 12 ಜನರು ಮೃತಪಟ್ಟಿದ್ದಾರೆ.
ಮೊರೆನಾ ಜಿಲ್ಲೆಯ ಪಹವಾಲಿ ಗ್ರಾಮದಲ್ಲಿ ಕಳ್ಳಬಟ್ಟಿ ಸೇವಿಸಿ ನಾಲ್ವರು ಮೃತಪಟ್ಟಿದ್ದು, ಮನುಪುರ್ ಜಿಲ್ಲೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರ ಸ್ಥಿತಿ ಗಂಭೀರವಾಗಿದೆ.
ಮೊರೆನಾ ಜಿಲ್ಲೆಯಾದ್ಯಂತ ಎಲ್ಲೆಡೆ ಕಳ್ಳಬಟ್ಟಿ ತಯಾರಿಸಲಾಗುತ್ತಿದ್ದು, ವಿಷಕಾರಿಯಾಗಿದ್ದ ಅವುಗಳನ್ನು ಸೇವಿಸಿದ ಕಾರಣದಿಂದ 12 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯವಾಗಿ ತಯಾರಾಗುತ್ತಿರುವ ಮದ್ಯ ತಯಾರಿಕೆಯನ್ನು ನಿಲ್ಲಿಸದಿದ್ದರೆ ಇನ್ನಷ್ಟು ಜನರು ಜೀವ ಕಳೆದುಕೊಳ್ಳಬೇಕಾಗುತ್ತದೆ. ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.