Sunday, July 19, 2026
Homeಕರಾವಳಿಮಂಗಳೂರುನೆಲ್ಯಾಡಿ; ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಸ್ಥಳೀಯರು

ನೆಲ್ಯಾಡಿ; ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಸ್ಥಳೀಯರು

- Advertisement -
- Advertisement -

ನೆಲ್ಯಾಡಿ; ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ ಘಟನೆ ಕೊಕ್ಕಡದ ಅರಣ್ಯ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ನೋಡಿದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಯುವ ಜೋಡಿಯನ್ನು ಬೆಂಗಳೂರಿನ ಯಲಹಂಕ ನಿವಾಸಿಗಳಾದ ಶ್ರೀಶ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಅವರು ಭಾನುವಾರ ರಾತ್ರಿ ಬಸ್ಸಿನಲ್ಲಿ ಹೊರಟಿದ್ದು, ಕೊಕ್ಕಡದಲ್ಲಿ ಇಳಿದಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!