Wednesday, June 24, 2026
Homeಕರಾವಳಿಮಂಗಳೂರುಪುತ್ತೂರು: ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಪುತ್ತೂರು: ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

- Advertisement -
- Advertisement -

ಪುತ್ತೂರು: ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿ ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದುಕೊಂಡು, ಸಂಪ್ಯ ಠಾಣೆಗೆ ಕರೆದೊಯ್ದುರು. ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆತ ಕಾಸರಗೋಡಿನ ಮುಳ್ಳೇರಿಯದ ವ್ಯಕ್ತಿ ಎನ್ನಲಾಗಿದೆ.

- Advertisement -

Latest News

error: Content is protected !!