- Advertisement -
- Advertisement -
ನವದೆಹಲಿ : ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್ ಡೌನ್ ಅವಧಿಯು ನಾಳೆಗೆ ಮುಕ್ತಾಯವಾಗುತ್ತಿದೆ.
ಇನ್ನೂ ಈ ನಡುವೆ ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಸರ್ಕಾರಗಳು ಲಾಕ್ ಡೌನ್ ವಿಸ್ತರಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.ಲಾಕ್ ಡೌನ್ ವಿಸ್ತರಣೆ ಸಂಬಂಧ ಮಹಾರಾಷ್ಟ್ರ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದ್ದು, ಸದ್ಯ ಮಹಾರಾಷ್ಟ್ರ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನೂ, ತಮಿಳುನಾಡು ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನೂ ತೆಲಂಗಾಣ ಶನಿವಾರವೇ ಲಾಕ್ ಡೌನ್ ನ್ನು ವಿಸ್ತರಿಸಿದೆ.
ಈ ಮೂರು ರಾಜ್ಯಗಳು ಕೂಡ ಸೋಂಕಿತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೂ ದೇಶದಲ್ಲಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ಮೋದಿ ನಾಳೆ ಅಧಿಕೃತ ಘೋಷಣೆ ಹೊರಡಿಸಲಿದ್ದಾರೆ.
- Advertisement -