ಕೋರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್ ಡೌನ್ ಜಾರಿ ಮಾಡಿದ್ದರೂ, ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರೆಸಲಾಗಿದೆ. ಏಪ್ರಿಲ್ 30ರ ವರೆಗೆ ಲಾಕ್ಡೌನ್ ಮುಂದುವರೆಯಲಿದ್ದು, ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದ ಪ್ರದೇಶಗಳಲ್ಲಿ ಮಾತ್ರವಲ್ಲದೇ ಎಲ್ಲ ಜಿಲ್ಲೆಗಳಲ್ಲಿಯೂ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಈಗಾಗಲೇ ಎಲ್ಲ ಪ್ರಮುಖ ರಸ್ತೆ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ.
ಮೀನುಗಾರಿಕೆ, ಕೃಷಿ ಚಟುವಟಿಕೆ ಹೊರತುಪಡಿಸಿ ಎಲ್ಲಾ ವ್ಯಾಪಾರ ವಾಣಿಜ್ಯ ವಹಿವಾಟು ಬಂದ್ ಮಾಡಲಾಗುವುದು.
ಅಗತ್ಯ ವಸ್ತು ಖರೀದಿಗೂ ಕಠಿಣ ನಿರ್ಬಂಧವಿರುತ್ತದೆ. ಅನಗತ್ಯವಾಗಿ ತಿರುಗಾಡುವವರಿಗೆ ಬಿಸಿ ಮುಟ್ಟಿಸಲು ಪೊಲೀಸರು ಸಜ್ಜಾಗಿದ್ದಾರೆ.
ಅಂತರ ಜಿಲ್ಲಾ ಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು.
ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಮಾಡಲಾಗುವುದು.
ಸಿನಿಮಾ ಮಂದಿರ, ಬಾರ್, ಮಾಲ್ ಈಗಾಗಲೇ ಬಂದ್ ಆಗಿದ್ದು, ಏಪ್ರಿಲ್ 30 ರ ವರೆಗೆ ಬಂದ್ ಆಗಲಿವೆ.
ಇನ್ನು ಶಾಲೆ-ಕಾಲೇಜುಗಳಿಗೆ ಈಗಾಗಲೇ ಘೋಷಣೆಯಾಗಿರುವ ರಜೆ ಮುಂದುವರೆಯಲಿದೆ.
ಮೆಟ್ರೋ, ರೈಲು, ಬಸ್ ಸಂಚಾರ ಕೂಡ ಸ್ಥಗಿತವಾಗಿದ್ದು ಇದು ಏಪ್ರಿಲ್ 30 ರ ವರೆಗೂ ಸ್ಥಗಿತವಾಗಲಿದೆ.
ಹಾಟ್ ಸ್ಪಾಟ್ ಎಂದು ಗುರುತಿಸಲಾಗಿರುವ ಪ್ರದೇಶಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗುವುದು.
ತುರ್ತು ಅಗತ್ಯವಿರುವ ಕಾರ್ಖಾನೆಗಳ ಓಪನ್ ಮಾಡಲು ಸೂಚನೆ ನೀಡಲಾಗಿದೆ.
ಅಗತ್ಯ ಸೇವೆ ನೌಕರರ ಸಂಚಾರಕ್ಕೆ ಅವಕಾಶವಿದೆ.
ಉಳಿದಂತೆ ಸೋಂಕು ತಡೆಗೆ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಿ ನಿರ್ಬಂಧ ಹೇರಲಾಗುವುದು ಎಂದು ಹೇಳಲಾಗಿದೆ.