- Advertisement -
- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ.4 ಸೋಮವಾರದಿಂದ ಬೆಳಗ್ಗೆ 7 ರಿಂದ ಸಂಜೆ 7 ರ ತನಕ ರಿಲೀಫ್ ನೀಡಲಾಗಿದ್ದು ,ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಮಾಹಿತಿ ನೀಡಿದ ಅವರು ಹೆಚ್ಚು ಜನಜಂಗುಳಿಯಾಗುವ ಕಾರಣದಿಂದಾಗಿ ಮಾಲ್, ಸೆಲೂನ್, ಬಾರ್, ರೆಸ್ಟೂರೆಂಟ್, ಬ್ಯೂಟಿಪಾರ್ಲರ್, ದಂತ ಚಿಕಿತ್ಸಾಲಯಕ್ಕೆ ಅವಕಾಶ ನೀಡಲಾಗುವುದಿಲ್ಲ. ಉಳಿದಂತೆ ಎಲ್ಲಾ ಅಂಗಡಿ ಮುಗ್ಗಟ್ಟುಗಳು ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಾಳೆಯಿಂದ ಎಲ್ಲಾ ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದೆ. ಆದರೆ ಅಲ್ಲಿ ಮಾರಾಟ ಮಾಡಲು ಮಾತ್ರ ಅವಕಾಶ ಅಲ್ಲಿ ಮದ್ಯಪಾನ ಮಾಡಲು ಅವಕಾಶವಿಲ್ಲ. ಬಾರ್ ಆಂಡ್ ರೆಸ್ಟೂರೆಂಟ್‌ಗಳಿಗೆ ತೆರೆಯಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.
- Advertisement -