Thursday, June 4, 2026
Homeಪ್ರಮುಖ-ಸುದ್ದಿಎಸ್ಸೆಸೆಲ್ಸಿ ಪರೀಕ್ಷೆ ಬಳಿಕ ರಾಜ್ಯದಲ್ಲಿ ಲಾಕ್ ಡೌನ್ ?

ಎಸ್ಸೆಸೆಲ್ಸಿ ಪರೀಕ್ಷೆ ಬಳಿಕ ರಾಜ್ಯದಲ್ಲಿ ಲಾಕ್ ಡೌನ್ ?

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗನೇ ಇದೆ. ಇದು ರಾಜ್ಯದ ಜನರನ್ನು ಆತಂಕಕ್ಕೆ ತಳ್ಳಿದೆ. ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಕೊರೊನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆಯಾಗಿದೆ. ಇದೇ ಸಭೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಹತ್ವದ ಚರ್ಚೆಯಾಗಿದೆ ಅಂತಾ ಹೇಳಲಾಗ್ತಿದೆ.

ಈಗ ರಾಜ್ಯದಲ್ಲಿ ಎಸ್ಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷೆ ಮುಗಿದ ಬಳಿಕ ಅಂದ್ರೆ ಜುಲೈ 7 ರ ಬಳಿಕ 12 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ತರುವ ನಿಟ್ಟಿನಲ್ಲಿ ಇಂದಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಇನ್ನು ಲಾಕ್ ಡೌನ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಕಂದಾಯ ಸಚಿವ ಆರ್ .ಅಶೋಕ್ ಅವರು ಜುಲೈ 7 ನಂತರ ಸಿಎಂ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಜಾರಿಗೆ ತರಲಿದ್ದಾರೆ. ಹಾಗಾಗಿ ಅಲ್ಲಿವರೆಗೆ ಕಾದು ನೋಡಿ ಹೇಳಿದ್ದಾರೆ. ಆರ್. ಅಶೋಕ್ ಅವರ ಈ ಹೇಳಿಕೆ ಲಾಕ್ ಡೌನ್ ನ ಸೂಚನೆ ಕೊಟ್ಟಂತೆ ಕಾಣಿಸ್ತಿದೆ.ಈಗಾಗಲೇ ಮಹಾರಾಷ್ಟ್ರ ಸರ್ಕಾರ ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಿಸಿದೆ. ಅದೇ ರೀತಿ ರಾಜ್ಯ ಸರ್ಕಾರ ಕೂಡ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

- Advertisement -

Latest News

error: Content is protected !!