Thursday, June 4, 2026
Homeಇತರನಿಯಂತ್ರಣಕ್ಕೆ ಸಿಗದ ಕೊರೊನಾ.. ಇನ್ಮೇಲೆ ಶನಿವಾರವೂ ಲಾಕ್ ಡೌನ್ ಸಾಧ್ಯತೆ- ಸುಳಿವು ಕೊಟ್ಟ ಸಿಎಂ

ನಿಯಂತ್ರಣಕ್ಕೆ ಸಿಗದ ಕೊರೊನಾ.. ಇನ್ಮೇಲೆ ಶನಿವಾರವೂ ಲಾಕ್ ಡೌನ್ ಸಾಧ್ಯತೆ- ಸುಳಿವು ಕೊಟ್ಟ ಸಿಎಂ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ನಿಯಂತ್ರಣಕ್ಕೆ ಸಿಗದ ಹಂತಕ್ಕೆ ತಲುಪುತ್ತಿದೆ ಕೊರೊನಾ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಹೇಳುವಂತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರೇ ಸುಳಿವು ಕೊಟ್ಟಿದ್ದಾರೆ.

ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ, ಬಿ.ಎಸ್.ಯಡಿಯೂರಪ್ಪ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಹಾಗಾಗಿ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಅಲ್ಲದೇ ಪ್ರತಿದಿನ ಅತೀ ಹೆಚ್ಚು ಕೇಸುಗಳು ವರದಿಯಾಗುತ್ತಿರುವ  ಮೈಸೂರು, ಬಳ್ಳಾರಿ, ಕಲಬುರ್ಗಿ, ಯಾದಗಿರಿ, ದಕ್ಷಿಣಕನ್ನಡ ಜಿಲ್ಲೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕೆಲವು ತಾಲೂಕುಗಳಲ್ಲಿ  ಸ್ವಯಂಪ್ರೇರಿತ ಲಾಕ್ ಡೈನ್ ಜಾರಿಯಲ್ಲಿದೆ ಎಂದಿದ್ದಾರೆ. ಬಿಎಸ್ವೈ ಅವು ಜಿಲ್ಲಾಡಳಿತಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳೋದಕ್ಕೆ ಸೂಚನೆ ನೀಡಿದ್ದೇವೆ ಅನ್ನೋದನ್ನು ನೋಡಿದ್ರೆ ಶನಿವಾರವೂ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಅಂತಾ ಹೇಳಲಾಗುತ್ತಿದೆ.

- Advertisement -

Latest News

error: Content is protected !!