Sunday, April 28, 2024
Homeತಾಜಾ ಸುದ್ದಿದಕ್ಷಿಣಕನ್ನಡ ಜಿಲ್ಲೆ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರಿಕೆ...

ದಕ್ಷಿಣಕನ್ನಡ ಜಿಲ್ಲೆ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರಿಕೆ : ಸಿಎಂ ಯಡಿಯೂರಪ್ಪ ಘೋಷಣೆ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ. ಇತರೆ ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಗೊಳಿಸಲಾಗುತ್ತಿದೆ. ಆದ್ರೇ ಕರ್ಪ್ಯೂ ಮುಂದುವರೆಯಲಿದೆ. ಕಾರ್ಖಾನೆಗಳನ್ನು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಒಂದೂವರೆ ಎರಡು ಗಂಟೆಯಿಂದ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ, ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಇಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ. ರಾಜ್ಯದದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅನ್ವಯವಾಗುವಂತೆ ಯಾವುದೇ ಮಾರ್ಗಸೂಚಿ ಅನ್ವಯವಾಗುವುದಿಲ್ಲ. ಈ ಜಿಲ್ಲೆಗಳಲ್ಲಿ ದಿನಾಂಕ 21-06-2021ರವರೆಗೆ ಲಾಕ್ ಡೌನ್ ಯಥಾಸ್ಥಿತಿ ಮುಂದುವರೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೆಚ್ಚಿನ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ ಎಂದರು

ಎಲ್ಲಾ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕೆಲಸ ಮಾಡಬಹುದಾಗಿದೆ. ಗಾರ್ಮೆಟ್ಸ್ ಗಳಲ್ಲಿ ಶೇ.30ರಷ್ಟು ನೌಕರರೊಂದಿಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆ ಪ್ರಾರಂಭಿಸಲು ಅವಕಾಶವಿದೆ. ಇಂತಹ ಅಂಗಡಿ ತೆರೆಯಲು ಅವಕಾಶ. ಪಾರ್ಕ್ ಬೆಳಿಗ್ಗೆ 5 ರಿಂದ 10ರವರೆಗೆ ತೆರೆಯಲು ಅವಕಾಶವನ್ನು ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 2ಗಂಟೆಯವರೆಗೆ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆಟೋ ಟ್ಯಾಕ್ಸಿ ಸಂಚಾರಕ್ಕೆ ಇಬ್ಬರು ತೆರಳೋದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಕೋವಿಡ್ ಕರ್ಪ್ಯೂ ರಾತ್ರಿ 7 ರಿಂದ ಬೆಳಿಗ್ಗೆ 5 ಜಾರಿಯಲ್ಲಿರಲಿದೆ. ವಾರಾಂತ್ಯ ಕರ್ಪೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಅನ್ ಲಾಕ್ ಜಾರಿಗೊಳಿಸಿದರೂ, ಬಿಎಂಟಿಸಿ, ಸಾರಿಗೆ ಬಸ್ ಸಂಚಾರ ಆರಂಭಿಸೋದಿಲ್ಲ. ಕೆಲವು ಸರ್ಕಾರಿ ಕಚೇರಿಗಳಿಗೆ ಶೇ.50ರಷ್ಟು ನೌಕರರೊಂದಿಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಅಂತರ ಜಿಲ್ಲಾ ಓಡಾಟಕ್ಕೂ ಅವಕಾಶ ನೀಡಲಾಗಿದೆ ಎಂದರು.

- Advertisement -
spot_img

Latest News

error: Content is protected !!