ಬೆಂಗಳೂರು :ಎ.೨೭ ರಂದು ದೇಶದ ಪ್ರಧಾನಮಂತ್ರಿ ಮೋದಿಯವರೊಂದಿಗೆ ಸಭೆ ನಡೆದ ಬೆನ್ನಲ್ಲೇ ರಾಜ್ಯ ಸರ್ಕಾರ ಲಾಕ್ಡೌನ್ ಇನ್ನಷ್ಟು ಸಡಿಲಿಕೆಗೆ ಸಂಬಂಧಪಟ್ಟಂತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಲಾಕ್ಡೌನ್ನಲ್ಲಿ ಈಗಾಗಲೇ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆ ಮಾಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಲಾಕ್ಡೌನ್ ಅವಧಿ ಮೇ 3ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ನಿನ್ನೆ ಪ್ರಧಾನಮಂತ್ರಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಆಯಾ ರಾಜ್ಯಗಳಲ್ಲಿನ ಕೊವಿಡ್ ನಿಯಂತ್ರಣ ಪರಿಸ್ಥಿತಿಯನ್ನು ಪರಾಮರ್ಶಿಸಿದ್ದಾರೆ.
ಅದಕ್ಕೆ ಪೂರಕವಾಗಿ ಕೆಲವು ಬದಲಾವಣೆಗಳೊಂದಿಗೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿಯನ್ನು ನೀಡಿದ್ದು, ಮುಂದಿನ ಆದೇಶದವರೆಗೆ ಇದು ಅನ್ವಯ ಆಗಲಿದೆ.
ಬೆಂಗಳೂರು ನಗರ, ಬೆಳಗಾವಿ, ಮೈಸೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಾಕ್ಡೌನ್ನಲ್ಲಿ ಯಥಾ ಸ್ಥಿತಿಯಲ್ಲಿಯೇ ಮುಂದುವರಿಯಲಿದೆ.
ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಲಾಕ್ಡೌನ್ನಲ್ಲಿ ಹೆಚ್ಚಿನ ಸಡಿಲಿಕೆ ಮಾಡಿದ್ದು ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.
ಈ ಮೇಲಿನ ಜಿಲ್ಲೆಗಳಲ್ಲಿ ರಾಮನಗರ ಹೊರತು ಪಡಿಸಿ ಉಳಿದ ಎಲ್ಲ ಕಡೆ ಹಳ್ಳಿ ಪ್ರದೇಶಗಳಲ್ಲಿ ಇರುವ ಉತ್ಪಾದನಾ ಮತ್ತು ಕೈಗಾರಿಕಾ ಉದ್ಯಮಗಳನ್ನು ಪ್ರಾರಂಭಿಸಬಹುದು. ಶೇ.50ರಷ್ಟು ಕಾರ್ಮಿಕರು ಆಗಮಿಸಬೇಕು. ಆದರೆ ಮಾಸ್ಕ್, ಸ್ಯಾನಿಟೈಸರ್ಗಳ ಬಳಕೆ ಕಡ್ಡಾಯ. ಹಾಗೇ ರಫ್ತು ಆಧಾರಿತ ಘಟಕಗಳಿಗೆ, ವಿಶೇಷ ಆರ್ಥಿಕ ವಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರವೇಶ ಮಾಡುವುದನ್ನು ನಿರ್ಬಂಧಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.
ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮೀಣ , ಗದಗ, ತುಮಕೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಧಾರವಾಡಗಳು ಸದ್ಯ ಗ್ರೀನ್ ಝೋನ್ನಲ್ಲಿ ಇವೆ. ಅಲ್ಲಿ ಎಲ್ಲ ಅಂಗಡಿಗಳನ್ನು ತೆರೆಯುವುದು, ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡುವುದು ಆಯಾ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನೆಗೆ ಬಿಡಲಾಗಿದೆ
ಷರತ್ತಿನೊಂದಿಗೆ ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ : ಕರ್ನಾಟಕ ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
- Advertisement -
- Advertisement -
- Advertisement -