Friday, June 27, 2025
Homeಕರಾವಳಿಮಂಗಳೂರುಬಂಟ್ವಾಳ : ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬಂಟ್ವಾಳ : ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

spot_img
- Advertisement -
- Advertisement -

ಬಂಟ್ವಾಳ :  ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಮತ್ತು ಖಜಾನೆಯ ಎಫ್.ಡಿ‌‌‌‌.ಎ ಬಸವೇ ಗೌಡ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪ್ರಕರಣ: ಪಿರ್ಯಾದಿದಾರರ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ನೊಂದರಲ್ಲಿ ಕಾರ್ಯದರ್ಶಿ  ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ.  ತಡ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ.  ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರವರ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ  ವಿಚಾರಿಸಿದರೂ ಕೆಲಸ ಆಗಿಲ್ಲ. ನಂತರ ಪಿರ್ಯಾದಿದಾರರ ಖಾತೆಗೆ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ  ಶ್ರೀ ಭಾಸ್ಕರ್ ರವರು ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರ ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ  ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರವರು ಹಾಗೂ ಬಂಟ್ವಾಳ ಖಜಾನೆಯ  ಎಫ್.ಡಿ.ಎ ಬಸವೇಗೌಡ ರವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮೇ.14 ರಂದು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರವರು ಪಿರ್ಯಾದಿದಾರರಿಂದ ರೂ 5000/- ಹಾಗೂ ಬಂಟ್ವಾಳ  ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರು ರೂ 5000/- ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀ ಕುಮಾರಚಂದ್ರ, ಡಿವೈಎಸ್ಪಿ ಡಾ.ಗಾನ.ಪಿ.ಕುಮಾರ್ ಮತ್ತು ಶ್ರೀ ಸುರೇಶ್ ಕುಮಾರ್ ಇನ್ಸ್ಪೆಕ್ಟರ್ ಶ್ರೀಮತಿ ಭಾರತಿ.ಜಿ ಮತ್ತು ಶ್ರೀ ಚಂದ್ರಶೇಖರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -
spot_img

Latest News

error: Content is protected !!