Friday, May 10, 2024
Homeಕರಾವಳಿಮಂಗಳೂರು : ಕಾಮಗಾರಿಯ ವರದಿ ನೀಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ:ಲಂಚಕ್ಕೆ ಬೇಡಿಕೆ ಇಟ್ಟ ಲೋಕೋಪಯೋಗಿ ಇಲಾಖೆಯ...

ಮಂಗಳೂರು : ಕಾಮಗಾರಿಯ ವರದಿ ನೀಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ:ಲಂಚಕ್ಕೆ ಬೇಡಿಕೆ ಇಟ್ಟ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾ ಬಲೆಗೆ

spot_img
- Advertisement -
- Advertisement -

ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಆಕ್ಟೋಬರ್ 18 ರಂದು(ಇಂದು) ನಡೆದಿದೆ.

ಮಂಗಳೂರು ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ  ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಎಂಬಾತ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20,000/- ಲಂಚದ ಹಣ ಸ್ವೀಕರಿಸುತ್ತಿದ್ದಾಗ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜ್,  ಇನ್ಸ್ಪೆಕ್ಟರ್ ಸುರೇಶ್ ಕುಮಾರ್ , ಇನ್ಸ್ಪೆಕ್ಟರ್ ಅಮಾನುಲ್ಲಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -
spot_img

Latest News

error: Content is protected !!