Thursday, June 4, 2026
Homeಕರಾವಳಿಕಡಬ:ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ; ಲೋಕಾಯುಕ್ತ ಅಧಿಕಾರಿಗಳಿಂದ ಕಡಬ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯ ವಿಚಾರಣೆ

ಕಡಬ:ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ; ಲೋಕಾಯುಕ್ತ ಅಧಿಕಾರಿಗಳಿಂದ ಕಡಬ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯ ವಿಚಾರಣೆ

- Advertisement -
- Advertisement -

ಕಡಬ:ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವು ಕಡೆ ದಾಳಿ ನಡೆಸಿದ್ದಾರೆ. ಅದರಂತೆ  ಕಡಬ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯನ್ನು ವಿಚಾರಣೆ ನಡೆಸಿದ್ದಾರೆ.

ಸೋಮವಾರ ಪೇಟೆ ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದು ಪ್ರಸ್ತುತಚುನಾವಣಾ ನಿಮಿತ್ತ ಕಡಬ ತಾ.ಪಂ.ಗೆ ವರ್ಗಾವಣೆಗೊಂಡಿದ್ದ ಜಯಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಕಡಬ ತಾ.ಪಂ.ನಲ್ಲಿ ಮಡಿಕೇರಿ ವಿಭಾಗದ ಲೋಕಾಯುಕ್ತಾ ಪೋಲಿಸರು ಕಡಬ ತಾ.ಪಂ.ನಲ್ಲಿ ಇ.ಒ ಜಯಣ್ಣ ಅವರನ್ನು  ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜಯಣ್ಣ ಅವರ ಮನೆಗೆ ಮಂಗಳವಾರ  ದಾಳಿ ನಡೆಸಿದ ಲೋಕಾಯುಕ್ತ ಪೋಲಿಸರು ಬುಧವಾರ ಅವರನ್ನು ಕಡಬದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ‌ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಕಡಬದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!