Friday, June 5, 2026
Homeಕರಾವಳಿಮಂಗಳೂರುಮಂಗಳೂರು : ಲೋಕಾಯುಕ್ತ ಕಚೇರಿಗೆ ಹಣದೊಂದಿಗೆ ಲಂಚ ನೀಡಲು ಬಂದ ಅಧಿಕಾರಿ: ಲೋಕಾಯುಕ್ತ ಕಚೇರಿಯಲ್ಲೇ ಲಾಕ್...

ಮಂಗಳೂರು : ಲೋಕಾಯುಕ್ತ ಕಚೇರಿಗೆ ಹಣದೊಂದಿಗೆ ಲಂಚ ನೀಡಲು ಬಂದ ಅಧಿಕಾರಿ: ಲೋಕಾಯುಕ್ತ ಕಚೇರಿಯಲ್ಲೇ ಲಾಕ್ ಆದ ಅಧಿಕಾರಿ

- Advertisement -
- Advertisement -

ಮಂಗಳೂರು : ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ರವರು ಮೇ. 30 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಸಮಯ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಪ್ರವೀಣ್  ನಾಯ್ಕ್ ಮಾಲೀಕರು, ಪ್ರಶಾಂತ್ ಆಯಿಲ್ ಇಂಡಸ್ಟ್ರಿಸ್, ಕೋಟೆಕಣಿ, ಮಂಗಳೂರು ರವರು ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದು ಪಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರಿಗೆ ಮಾಹಿತಿ ನೀಡಬೇಕು ಎಂಬುದಾಗಿ ಠಾಣೆಯ ಸಿಬ್ಬಂದಿಯವರಲ್ಲಿ ತಿಳಿಸಿ, ನಂತರ ಗಜೇಂದ್ರ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರು ರವರು ಪಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರವರಲ್ಲಿ ಮಾತನಾಡುತ್ತಾ ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು ಅಥವಾ ದಾಳಿ ಮಾಡಬಾರದು ಎಂಬುದಾಗಿ ತಿಳಿಸಿ ತಾನು 3 ತಿಂಗಳಿಗೊಮ್ಮೆ 25,000/- ಹಣವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಪಿರ್ಯಾದಿದಾರರಿಗೆ ಲಂಚದ ಅಮಿಷ ಒಡ್ಡಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗಜೇಂದ್ರ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರು ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಈ ದಿ‌ನ (ಮೇ. 30 ರಂದು) ಮಂಗಳೂರು ಲೋಕಾಯುಕ್ತ ಠಾಣೆಯ ಠಾಣಾಧಿಕಾರಿಯವರಿಗೆ ಲಂಚ ಹಣ ನೀಡುವುದಾಗಿ ಆಮೀಷ ಒಡ್ಡಿದ ಸರಕಾರಿ ಅಧಿಕಾರಿಯಾದ ಶ್ರೀ ಗಜೇಂದ್ರ ವಿ ಎಡಕೆ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರು ರವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ರವರು ಸಿಬ್ಬಂದಿಗಳ ಜೊತೆ ಕಾನೂನು ಕ್ರಮ ಕೈಗೊಂಡಿರುತ್ತಾರೆ.

- Advertisement -

Latest News

error: Content is protected !!