Wednesday, June 3, 2026
Homeಕರಾವಳಿಮಂಗಳೂರು: ಜಿಲ್ಲಾ ಪಂಚಾಯತ್‌ ಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಇಂಜಿನಿಯರ್

ಮಂಗಳೂರು: ಜಿಲ್ಲಾ ಪಂಚಾಯತ್‌ ಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಇಂಜಿನಿಯರ್

- Advertisement -
- Advertisement -

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಜಿಲ್ಲಾ ಪಂಚಾಯತ್‌ನ ಟೆಕ್ನಿಕಲ್‌ ಅಸಿಸ್ಟೆಂಟ್ ಇಂಜಿನಿಯರ್‌ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ  ಉರ್ವಾ ಸ್ಟೋರ್‌ ಬಳಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.

ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆಯೇ ಇಂಜಿನಿಯರ್‌ ಲಂಚಾವತಾರ ಬಯಲಾಗಿದೆ.  ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ರೂಪಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಇವರು 8 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.

- Advertisement -

Latest News

error: Content is protected !!