Thursday, September 10, 2026
Homeಅಪರಾಧಐದು ಗ್ರಾಮ ಪಂಚಾಯತ್ ಮೇಲೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ

ಐದು ಗ್ರಾಮ ಪಂಚಾಯತ್ ಮೇಲೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ

- Advertisement -
- Advertisement -

ಮಂಗಳೂರು : ಐದು ಗ್ರಾಮ ಪಂಚಾಯತ್ ಗಳ ಮೇಲೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ.10 ರಂದು ನಡೆದಿದೆ.

ತಲಪಾಡಿ, ಕೊಣಾಜೆ, ಬೆಳ್ಳಾರೆ, ಪಂಜ, ಬೆಳುವಾಯಿ ಗ್ರಾಮ ಪಂಚಾಯತ್ ಮೇಲೆ ಉಡುಪಿ, ಕಾರವಾರ, ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗ್ಗೆ 10:30 ಗಂಟೆ ವೇಳೆಗೆ ಬಂದು ಕಚೇರಿಯಲ್ಲಿರುವ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಲೋಕಾಯುಕ್ತ ಕೇಂದ್ರ ಕಛೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ,ತನಿಖೆಯ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ‌.

- Advertisement -

Latest News

error: Content is protected !!