Thursday, July 16, 2026
Homeಕರಾವಳಿಮಂಗಳೂರುಮಂಗಳೂರು : ಪಿಲಿಕುಳ ನಿಸರ್ಗಧಾಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು : ಪಿಲಿಕುಳ ನಿಸರ್ಗಧಾಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ

- Advertisement -
- Advertisement -

ಮಂಗಳೂರು : ಪಿಲಿಕುಳ ನಿಸರ್ಗಧಾಮದ ಕಚೇರಿ ಮೇಲೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಹೊರವಲಯದಲ್ಲಿರುವ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಅ.16 ರಂದು ಮಧ್ಯಾಹ್ನ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಡಾ.ಗಾನ.ಪಿ.ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಅನುದಾನ ದುರುಪಯೋಗ ಆರೋಪ, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ ಸರಬರಾಜಿನಲ್ಲಿ ಅವ್ಯವಹಾರ ಆರೋಪ, ಮೃಗಾಲಯದ ನಿರ್ವಹಣೆಯಲ್ಲಿ ಭಾರಿ ಲೋಪದೋಷಗಳು ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಆದಾಯ ಮತ್ತು ವೆಚ್ಚದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ.

ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ  ಕಚೇರಿ ಮೇಲೆ ಈ ಹಿಂದೆ (ಮೇ.23 ರಂದು)ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.

- Advertisement -

Latest News

error: Content is protected !!