Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು...

ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

- Advertisement -
- Advertisement -

ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ (ನ.21) ರಂದು ಬೆಗ್ಗೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಲೋಕಾಯುಕ್ತ ಎಸ್‌ಪಿ ನಟರಾಜ್‌ ನೇತೃತ್ವದಲ್ಲಿ ಏಕಕಾಲದಲ್ಲಿ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರಿಗೆ ಕೃಷ್ಣವೇಣಿಯವರು ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆಗೊಂಡು ಬಂದಿದ್ದರು. ಇವರು ವೆಲೆನ್ಸಿಯಾದಲ್ಲಿರುವ ಫ್ರೆಡ್‌ ರೋಸ್‌ ಎನ್ಕಲೇವ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದಾರೆ. ಮಂಗಳೂರು, ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಬಂದಿದ್ದು, ಕಚೇರಿ ಮತ್ತು ಮನೆ ಮೇಲೆ ದಾಳಿ ಮಾಡಿದ್ದಾರೆ.

ಕೃಷ್ಣವೇಣಿ ಅವರ ಮನೆಯಲ್ಲಿ ಲೋಕಾಯಯಕ್ತ ದಾಳಿ ವೇಳೆ 110 ಗ್ರಾಂ ಚಿನ್ನಾಭರಣ,50,000 ಹಣ, ಒಂದು ಸಫಾರಿ ಕಾರು ಪತ್ತೆಯಾಗಿದೆ. ಇದೀಗ ಲೋಕಾಯುಕ್ತ ಕಾರ್ಯಾಚರಣೆ ಮುಕ್ತಾಯವಾಗಿದೆ.

- Advertisement -

Latest News

error: Content is protected !!