Saturday, May 18, 2024
Homeಕರಾವಳಿಬೆಳ್ತಂಗಡಿಯ ಆಡಳಿತ ಸೌಧಕ್ಕೆ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ; ಸ್ಥಳದಲ್ಲಿಯೇ ವಿಧವೆಯ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು

ಬೆಳ್ತಂಗಡಿಯ ಆಡಳಿತ ಸೌಧಕ್ಕೆ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ; ಸ್ಥಳದಲ್ಲಿಯೇ ವಿಧವೆಯ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು

spot_img
- Advertisement -
- Advertisement -

ಬೆಳ್ತಂಗಡಿ: ಲೋಕಾಯುಕ್ತ ಪೊಲೀಸರು ಸರಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3 ರಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರೂ.

ಇನ್ನೂ 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಕೂಡ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ಕಂಡು ಬಂದಿದ್ದು, ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ‌.

ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ.

ಡಿವೈಎಸ್ಪಿ ಡಾ.ಗಾನ.ಪಿ.ಕುಮಾರ್ , ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮನುಲ್ಲಾ.ಎ, ಸುರೇಶ್.ಕೆ.ಎನ್,ಸುರೇಶ್.ಸಿ.ಎಲ್ ಮತ್ತು ಸಿಬ್ಬಂದಿ ಬೆಳ್ತಂಗಡಿ ಭೇಟಿ ವೇಳೆ ಭಾಗಿಯಾಗಿದ್ದರು.

- Advertisement -
spot_img

Latest News

error: Content is protected !!