ಕಡಬ; ದಿನಾಂಕ: 28/11/2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಕಡಬ ತಾಲೂಕು ಕಛೇರಿ, ಕಡಬ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 28/11/2025 ರಂದು ಕಡಬ ತಾಲೂಕು ‘ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.
ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ದೂರವಾಣಿ ಅಥವಾ ನೀಡಬಹುದಾಗಿದೆ ಮೂಲಕವೂ ಅಹವಾಲು/ದೂರುಗಳನ್ನು ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.
ಅರ್ಜಿದಾರರು ನಮೂನೆ 1 & 11 ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವಂತೆ ಶ್ರೀ ಕುಮಾರ ಚಂದ್ರ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಮಂಗಳೂರು ರವರು ತಿಳಿಸಿರುತ್ತಾರೆ.


