Wednesday, August 12, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳ್ತಂಗಡಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

- Advertisement -
- Advertisement -

ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್‌ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ 11:30 ಕ್ಕೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ತಂಡ ದಾಳಿ ಮಾಡಿ ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!