Thursday, June 25, 2026
Homeಕರಾವಳಿಮಂಗಳೂರುಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ ಮನೆ...

ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ ಮನೆ ಮೇಲೆ ಲೋಕಾಯುಕ್ತ ದಾಳಿ: 3 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರಾಸ್ತಿ ಪತ್ತೆ

- Advertisement -
- Advertisement -

ಮಂಗಳೂರು: ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ ಮನೆ ಮೇಲೆ ಲೋಕಾಯುಕ್ತ  ಅಧಿಕಾರಿಗಳು ದಾಳಿ ನಡೆಸಿದ್ದು 3 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರಾಸ್ತಿ ಪತ್ತೆಯಾಗಿದೆ.

ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಅವರು ನೀಡಿದ ಸೋರ್ಸ್ ವರದಿ ಆಧರಿಸಿ ಏಪ್ರಿಲ್ 6ರಂದು ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಲೋಕಾಯುಕ್ತ ಎಸ್‌ಪಿ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ಮುಂಜಾನೆ 6 ತಂಡಗಳು ಬಾಬು ಅವರ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿರುವ ವಾಸದ ಮನೆ, ವಾಣಿಜ್ಯ ಮಳಿಗೆಗಳು, ಬೆಂಗಳೂರಿನಲ್ಲಿರುವ ಫ್ಲಾಟ್ ಹಾಗೂ ಮಂಗಳೂರಿನ ವಾಸದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿವೆ.


ಬೆಂಗಳೂರಿನ ನಿವಾಸದಲ್ಲಿ 23.64 ಲಕ್ಷ ರೂಪಾಯಿ ನಗದು ಸೇರಿದಂತೆ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಲ್ಲಿ ಡಿವೈಎಸ್‌ಪಿಗಳಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಹಾಗೂ ವಿವಿಧ ಜಿಲ್ಲೆಗಳ ಲೋಕಾಯುಕ್ತ ಸಿಬ್ಬಂದಿ ಭಾಗವಹಿಸಿದ್ದರು. ಸದ್ಯ ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!