Sunday, August 30, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

- Advertisement -
- Advertisement -

ಬೆಳ್ತಂಗಡಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಅ.1 ರಂದು ಮಧ್ಯಾಹ್ನ ವೇಳೆ ಭೇಟಿ ಮಾಡಿದರು.

ಮಂಜುನಾಥ ಸ್ವಾಮಿಯ ಭೇಟಿಯ ಮೊದಲು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಬಳಿಕ ಮಂಜುನಾಥ ಸ್ವಾಮಿಯ ದರ್ಶನ ಪಡೆದರು‌. ದೇವರ ದರ್ಶನಕ್ಕೆ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಸಹಕರಿಸಿದರು.

ನ್ಯಾಯಮೂರ್ತಿ ಧರ್ಮಸ್ಥಳ ಭೇಟಿ ವೇಳೆ ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಅಮಾನುಲ್ಲ, ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಜೊತೆಯಲ್ಲಿದ್ದರು.

- Advertisement -

Latest News

error: Content is protected !!