Friday, May 3, 2024
Homeಕರಾವಳಿಮಂಗಳೂರು : ನಾಳೆ ಮೂಡಬಿದ್ರೆಯಲ್ಲಿ  ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು : ನಾಳೆ ಮೂಡಬಿದ್ರೆಯಲ್ಲಿ  ಲೋಕಾಯುಕ್ತ ಜನ ಸಂಪರ್ಕ ಸಭೆ

spot_img
- Advertisement -
- Advertisement -

ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಅಧೀಕ್ಷಕರು, ಪೊಲೀಸ್‌ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದವಿತ್‌ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ದಿನಾಂಕ: 12-07-2023 ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಛೇರಿ, ಮೂಡಬಿದ್ರೆ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ 1 & II ರಲ್ಲಿ ಭರ್ತಿ ಮಾಡಿ ಅಫಿದಾವಿತ್‌ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು

ಪೊಲೀಸ್ ಅಧೀಕ್ಷಕರ ಕಛೇರಿ 08242950997,9364062517
ಪೊಲೀಸ್‌ ಉಪಾಧೀಕ್ಷಕರು-1 ಕಛೇರಿ

ಪೊಲೀಸ್‌ ಉಪಾಧೀಕ್ಷಕರು-2 ಕಛೇರಿ 08242453420,08242453420,9364062579,9364062580

ಪೊಲೀಸ್ ನಿರೀಕ್ಷಕರು-1 ಕಛೇರಿ 08242427237,9364062691

ಪೊಲೀಸ್ ನಿರೀಕ್ಷಕರು-2 ಕಛೇರಿ
0824 2427237,9364062692

- Advertisement -
spot_img

Latest News

error: Content is protected !!