Sunday, May 12, 2024
Homeತಾಜಾ ಸುದ್ದಿಲಂಚ ಸ್ವೀಕರಿಸುವಾಗ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ಬೆಳಗ್ಗೆ ನಾಲ್ಕು ಗಂಟೆಯವರೆಗೆ ಕಚೇರಿಯಲ್ಲಿ...

ಲಂಚ ಸ್ವೀಕರಿಸುವಾಗ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ಬೆಳಗ್ಗೆ ನಾಲ್ಕು ಗಂಟೆಯವರೆಗೆ ಕಚೇರಿಯಲ್ಲಿ ಅಧಿಕಾರಿಗಳಿಂದ ಶೋಧ

spot_img
- Advertisement -
- Advertisement -

ಬೆಂಗಳೂರು: ನಿನ್ನೆ 40 ಲಕ್ಷ ಲಂಚ ಸ್ವೀಕರಿಸುವಾಗ ಶಾಸಕ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಸಿಕ್ಕಿ ಬಿದ್ದಿದ್ದರು. ನಿನ್ನೆ ಸಂಜೆ 6.30 ರ ಸುಮಾರಿಗೆ ತಮ್ಮ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಬಳಿಕ ಕಚೇರಿಯಲ್ಲಿ ಶೋಧ ಕಾರ್ಯ ಆರಂಭಿಸಿದ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ 4 ಗಂಟೆವರೆಗೆ ಹುಡುಕಾಟ ನಡೆಸಿದ್ದು, ಕೊನೆಗೂ ಶೋಧ ಕಾರ್ಯಚರಣೆ ಅಂತ್ಯವಾಗಿದೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು 9 ಗಂಟೆ 30 ನಿಮಿಷಗಳ ಕಾಲ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ, ಕಚೇರಿಯಲ್ಲಿದ್ದ ಹಲವು ದಾಖಲೆ ಹಾಗೂ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿದೆ.

ಗುತ್ತಿಗೆದಾರರೊಬ್ಬರು ಕೆ ಎಸ್ ಡಿ ಎಲ್ ಗೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡೋದಕ್ಕೆ ಟೆಂಡರ್ ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಗುತ್ತಿಗೆಯನ್ನು ಕೊಡಿಸೋದಕ್ಕಾಗಿ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವಂತ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಾಗೂ ಬಿಡಬ್ಲ್ಯೂ ಎಸ್‌ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿರುವಂತ ಪ್ರಶಾಂತ್ 80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ನಿನ್ನೆ ಮುಂಗಡವಾಗಿ 40 ಲಕ್ಷ ಲಂಚದ ಹಣವನ್ನು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವಂತ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿಯಲ್ಲಿ ಪುತ್ರ ಪ್ರಶಾಂತ್ ಗೆ ನೀಡೋದಕ್ಕೆ ತೆರಳಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, 40 ಲಕ್ಷ ಹಣದೊಂದಿಗೆ ಶಾಸಕರ ಪುತ್ರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಇಂದು ಮುಂಜಾನೆ ದಾಳಿ ಅಂತ್ಯವಾಗಿದ್ದು, ಮುಕ್ಕಾಲು ಕೋಟಿ ರೂ. ವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!