- Advertisement -
- Advertisement -
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಲೋಕಪಾಲ್ ಸದಸ್ಯ ಎ.ಕೆ. ತ್ರಿಪಾಠಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ತ್ರಿಪಾಠಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ 8.45 ರ ಸುಮಾರಿಗೆ ಸಾವನ್ನಪ್ಪಿದ್ದಾರೆ.
ಇನ್ನು ಕೊರೊನಾ ಸೋಂಕಿತರಾಗಿದ್ದ ತ್ರಿಪಾಠಿಯವರ ಮಗಳು ಹಾಗೂ ಮನೆಕೆಲಸದ ಸಿಬ್ಬಂದಿಯೊಬ್ಬ ಸೋಂಕಿನಿಂದ ಗುಣಮುಖರಾಗಿದ್ದರು. ಆದರೆ ತ್ರಿಪಾಠಿ ಅವರನ್ನು ದೆಹಲಿಯ ಏಮ್ಸ್ ನ ಐಸಿಯು ನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿದ್ದಾರೆ.
- Advertisement -