Thursday, June 4, 2026
Homeಕರಾವಳಿಮಂಗಳೂರು ಹೊರವಲಯದಲ್ಲಿ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ

ಮಂಗಳೂರು ಹೊರವಲಯದಲ್ಲಿ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ

- Advertisement -
- Advertisement -

ಮಂಗಳೂರು: ಗಾಂಜಾ ಸೇವನೆಯ ಅಮಲಿನಲ್ಲಿ ಆಟೋ ರಿಕ್ಷಾ ಚಾಲಕನ ಮೇಲೆ ಯುವಕರ ತಂಡವೊಂದು ತಲವಾರಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರು ನಗರದ ಹೊರವಲಯದಲ್ಲಿ ನಡೆದಿದೆ.

ಚಿತ್ರಾಪುರ ಮೊಗವೀರ ಮಹಾಸಭಾ ವ್ಯಾಪ್ತಿಯ ಬೀಚ್‍ ಸಮೀಪದಲ್ಲಿ ತಲವಾರು ಬೀಸಿದ ಪರಿಣಾಮ ರಿಕ್ಷಾ ಚಾಲಕ ಸುನೀಲ್ ಎಂಬಾತ ಗಾಯಗೊಂಡಿದ್ದು, ಆಟೋ ರಿಕ್ಷಾಗೆ ಕೂಡಾ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.

ಘಟನೆ ನಡೆದ ವೇಳೆ ಹಲ್ಲೆ ಯತ್ನ ನಡೆಸಿದ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೊಬ್ಬ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!