Thursday, June 4, 2026
Homeಕರಾವಳಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

- Advertisement -
- Advertisement -

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಡ್ಕ ಸಮೀಪದ ದಾಸಕೋಡಿ ಮುಂಜಾನೆ ಸುಮಾರು 4.30 ರವೇಳೆಗೆ ಚರಂಡಿಗೆ ಬಿದ್ದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಚಾಲನೆ ಮಾಡಿದರ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದು, ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!